ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು, ಮಾರ್ಚ್​ 1: ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್ ಫೀಲ್ಡ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (Rameswaram Cafe blast) ವಾಗಿದೆ.

ಇದೀಗ ನಗರದ ಹೆಚ್ಎಎಲ್ ಠಾಣೆಯಲ್ಲಿ ಯುಎಪಿಎ (ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವ ಕಾಯ್ದೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ. ಘಟನೆಯಲ್ಲಿ 10 ಜನರಿಗೆ ಗಾಯವಾಗಿದ್ದು, ಮಧ್ಯಾಹ್ನ 12 :50 ರಿಂದ 1 ಘಂಟೆ ಸುಮಾರಿನಲ್ಲಿ ಘಟನೆ ಸಂಭವಿಸಿದೆ.

Latest Indian news

Popular Stories