
Crime
ಬಿ.ಎಸ್ ವೈಗೆ ಡಿಕೆಶಿ ಗಾಳ ? – ಕುತೂಹಲ ಮೂಡಿಸಿದ ಭೇಟಿ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ, ರಾಜಕೀಯ ವಿಚಾರವನ್ನು ಬಿಟ್ಟು ಆತ್ಮೀಯವಾಗಿ ಮಾತನಾಡಿದ್ದಾರೆ. ಆದರೆ 5 ಗ್ಯಾರಂಟಿ ಯೋಜನೆಗಳ ಜಾರಿ ಮುಂದಿಟ್ಟುಕೊಂಡು ಮತ್ತು ಬಿಬಿಎಂಪಿ ಚುನಾವಣೆಗಳ ನಡುವೆ ಪರಸ್ಪರ ರಾಜಕೀಯ ನಾಯಕರು ಭೇಟಿ ಮಾಡಿದ್ದು, ಸಾಮಾನ್ಯವಾಗಿ ಕುತೂಹಲ ಮೂಡಿಸಿದೆ.




