
Crime
ಶಕ್ತಿ ಯೋಜನೆ’ಯಡಿ ಸಾರಿಗೆ ನಿಗಮಕ್ಕೆ ‘5,600 ಹೊಸ ಬಸ್’ ಖರೀದಿ – ಸಿದ್ದರಾಮಯ್ಯ
ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್ ಖರೀದಿ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ
ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು,ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.




