ಬೈಂದೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಹೊಳೆ ನೀರಿಗೆ ಬಿದ್ದು ಮೃತ್ಯು

ಬೈಂದೂರು: ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಹೊಳೆ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಮೃತರನ್ನು ರಾಮ (57) ಎಂದು ಗುರುತಿಸಲಾಗಿದೆ.

ಮಂಗಳವಾರ ಮಧ್ಯಾಹ್ನ ಮನೆ ಬಳಿ ಇರುವ ಸುಮನಾ ಹೊಳೆಯಲ್ಲಿ ಅವರಿಗೆ ಸಂಬಂಧಿಸಿದ ದೋಣಿಯಲ್ಲಿ ಒಬ್ಬರೇ ನಾಡ ದೋಣಿ ಮೀನುಗಾರಿಕೆ ಬಗ್ಗೆ ಹೋಗಿದ್ದಾರೆ.

ದೋಣಿಯಲ್ಲಿ ಹೊಳೆಗೆ ಬಲೆ ಹಾಕಿ ಮೀನುಗಾರಿಕೆ ಮಾಡುತ್ತಿರುವ ಸಮಯ ಆಕಸ್ಮಿಕವಾಗಿ ಕಾಲಿನ ಆಯತಪ್ಪಿ ಹೊಳೆ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 13/2024 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories