ಬೈಂದೂರು: ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

ಬೈಂದೂರು: ರಾ.ಹೆ. 66ರ ಬೈಂದೂರು ಸಮೀಪದ ಒತ್ತಿನೆಣೆ ತಿರುವಿನಲ್ಲಿ ಬುಧವಾರ ರಾತ್ರಿ ಗುಡ್ಡದ ಮಣ್ಣು ಕುಸಿದಿದೆ.

ಬೈಂದೂರು ಭಾಗದಲ್ಲಿ ಹಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿ ಯುತ್ತಿದ್ದು, ಬುಧವಾರ ರಾತ್ರಿ ಅಧಿಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡದ ಮೇಲ್ಭಾಗದಲ್ಲಿ ಮಣ್ಣು ಅಪಾಯಕಾರಿ ಸ್ಥಿತಿಯಲ್ಲಿದ್ದು, ಕೆಲವು ತಿಂಗಳ ಹಿಂದೆ ಅಗ್ನಿಶಾಮಕ ವಾಹನದ ಮೂಲಕ ನೀರು ಸಿಂಪಡಿಸಿ ಕುಸಿಯುವ ಭೀತಿ ಯಲ್ಲಿರುವ ಗುಡ್ಡದ ಮಣ್ಣನ್ನು ಸಮತಟ್ಟು ಮಾಡಲಾಗಿತ್ತು. ಈ ಹಿಂದೆಯೂ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಂಭವವಿದ್ದಾಗ ಮಣ್ಣು ತೆರವುಗೊಳಿಸಿ ಮುಂಜಾಗ್ರತೆ ವಹಿಸ ಲಾಗಿತ್ತು. ಕಳೆದೆರಡು ದಿನದಿಂದ ಮಳೆಯ ಪ್ರಮಾಣ ಅಧಿಕವಾದ ಕಾರಣ ಗುಡ್ಡದ ಮಣ್ಣು ಕುಸಿದಿದೆ.

ಒಂದೆರಡು ಟಿಪ್ಪರ್‌ನಷ್ಟು ಮಣ್ಣು ಚರಂಡಿಗೆ ಕುಸಿದಿದ್ದು, ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ಗುಡ್ಡದ ಮಣ್ಣು ಕುಸಿತದಿಂದ ಹೆದ್ದಾರಿ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಐಆರ್‌ಬಿ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಒತ್ತಿನೆಣೆ ತಿರುವಿನ ರಾಘವೇಂದ್ರ ಮಠದ ಬಳಿ ಕುಸಿತ ಸಂಭವಿಸುವ ಆತಂಕ ಇರುವ ಕಾರಣ ಹೆದ್ದಾರಿ ಇಲಾಖೆ ಮತ್ತು ಕಂಪೆನಿ ಪ್ಲಾಸ್ಟರಿಂಗ್‌ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದೆ. ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ ಬಳಿಕ ದಿಲ್ಲಿಯಿಂದ ಹಿರಿಯ ಭೂ ವಿಜ್ಞಾನಿಗಳು ಈ ಪ್ರದೇಶಗಳಿಗೆ ಭೇಟಿ ನೀಡಿದ್ದರು.

Latest Indian news

Popular Stories