Crime

ಬಳ್ಳಾರಿ: ಜಿಲ್ಲಾಡಳಿತದಿಂದ ವಿವಿಧ ವಿಭಾಗಗಳಿಲ್ಲಿ ಅರ್ಜಿ ಆಹ್ವಾನ

ಬಳ್ಳಾರಿ, ಅ 05: ಕಲಬುರಗಿಯ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ವತಿಯಿಂದ ಸೆಪ್ಟಂಬರ್-2020ನೇ ಮಾಹೆಯಲ್ಲಿ ಪ್ರಾರಂಭವಾಗುವ 6ತಿಂಗಳ ಹಾಗೂ 180ದಿನಗಳ ರೇಗ್ಯೂಲರ್ ಮತ್ತು ದೂರ ಶಿಕ್ಷಣ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಜಿಲ್ಲೆಯ ಸಹಕಾರ ಸಂಘ/ ಸಂಸ್ಥೆಗಳ ಮತ್ತು ಸಹಕಾರ ಬ್ಯಾಂಕ್‍ಗಳ ಅರ್ಹ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಕ್ತರು ಅಗತ್ಯ ದಾಖಲಾತಿಗಳೊಂದಿಗೆ www.kscfdcm.co.in ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಹಕಾರ ಶಿಕ್ಷಣ ತರಬೇತಿ ಪಡೆದ ಸಿಬ್ಬಂದಿಗಳಿಂದ ಸಹಕಾರ ಸಂಘ ಸಂಸ್ಥೆಗಳಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಯಾಗುವುದರ ಮೂಲಕ ಹೆಚ್ಚಿನ ಕಾರ್ಯನಿರ್ವಹಣೆ ಸಾಧ್ಯವಾಗುತ್ತದೆ. ಕಚೇರಿಗೆ ತೊಂದರೆಯಾಗದಂತೆ ಮಹಾಮಂಡಲವು ದೂರಶಿಕ್ಷಣದ ಮೂಲಕ ಈ ತರಬೇತಿಯನ್ನು ಪಡೆಯಲು ಅನುಕೂಲ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ವಿವಿಧ ಕಮ್ಮಟಗಳಿಗೆ ಅರ್ಜಿ ಆಹ್ವಾನ:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರೋನಾ ಲಾಕ್‍ಡೌನ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ರಾಜ್ಯ ಮಟ್ಟದ ಮೂರುದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಕಮ್ಮಟ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟಗಳು ನಡೆಯಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು 20 ರಿಂದ 40ವರ್ಷಗಳ ವಯೋಮಿತಿ ಹೊಂದಿದ್ದು ಅಗತ್ಯ ದಾಖಲಾತಿಗಳೊಂದಿಗೆ ಅಕಾಡೆಮಿ ವೆಬ್‍ಸೈಟ್

http://karnatakakasahithyaacademy.org ಯಲ್ಲಿ ಅರ್ಜಿಯನ್ನು ಪಡೆದು ಪ್ರತಿ ವಿಭಾಗಕ್ಕೆ ಅರ್ಜಿಗಳನ್ನು ಪ್ರತ್ಯೇಕವಾಗಿ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅ.10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ:- ಐಟಿಐ ಹಾಗೂ ದ್ವಿತೀಯ ಪಿಯುಸಿ(ವಿಜ್ಞಾನ)ಯಲ್ಲಿ ಉತ್ತಿರ್ಣರಾಗಿರುವ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ವರ್ಷದ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ನಾನ್ ಇಂಟರಾಕ್ಟೀವ್ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಮೂಲ ಅಗತ್ಯ ಮೂಲ ದಾಖಲಾತಿಗಳೊಂದಿಗೆ ಹತ್ತಿರದ ಸರ್ಕಾರಿ ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಭೇಟಿ ನೀಡಿ ಇಲಾಖೆಯ ವೆಬ್‍ಸೈಟ್ http://dtek.karnataka.gov.in/ನಲ್ಲಿ ಅ.06ರೊಳಗೆ ಆನ್‍ಲೈನ್ ಮೂಲಕ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಹರಪನಹಳ್ಳಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಚೇರಿ ಹಾಗೂ ಮೊ.ಸಂ.9448523484ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button