Crime

ಸಿಬಿಐ ದಾಳಿ ಬಿಜೆಪಿ ಸರಕಾರದ ಕುತಂತ್ರ-ಸಿದ್ದರಾಮಯ್ಯ ಆರೋಪ

ಬೆಂಗಳೂರು,ಅ.5:- ಇಂದು ಮುಂಜಾನೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್‍ನಲ್ಲಿ ಆರೋಪಿಸಿದ್ದಾರೆ. ಮೋದಿ ಸರ್ಕಾರದ ರಾಜಕೀಯ ಷಡ್ಯಂತ್ರವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ದಿವಾಳಿತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆಯ ಸಂದರ್ಭದಲ್ಲಿ ಸಿಬಿಐ ದಾಳಿ ಮಾಡಿಸಿರುವುದು ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಈ ಹೊತ್ತಿನಲ್ಲಿ ನಮ್ಮ ಸ್ಥೈರ್ಯವನ್ನು ಕುಗ್ಗಿಸಲು ಮಾಡುತ್ತಿರುವ ಪ್ರಯತ್ನ, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ಅದೇ ರೀತಿ ಕಾಂಗ್ರೆಸ್ ಮತ್ತೊಬ್ಬ ನಾಯಕ ದಿನೇಶ್ ಗುಂಡೂರಾವ್ ಅವರು ಕೂಡ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿರುತ್ತಾರೆ. ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆಯ ಸಂದರ್ಭದಲ್ಲೇ ಈ ದಾಳಿ ನಡೆದಿರುವುದು ಅದರ ಹಿಂದಿನ ಉದ್ದೇಶ ತೋರಿಸುತ್ತದೆ. ಬಿಜೆಪಿಯ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button