Crime

ಸಿಬಿಎಸ್‌ಇ: 10 ನೇ ಪರೀಕ್ಷೆ ರದ್ದು

ನವದೆಹಲಿ: ಕೊರೊನಾದಿಂದಾಗಿ ಇಡೀ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ 10ನೆ ತರಗತಿ ಸಿಬಿಎಸ್‌ಇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಶಿಕ್ಷಣ ಸಚಿವರು ಹಾಗೂ ಸಿಬಿಎಸ್‌ಇ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ನವದೆಹಲಿ , ಮಹಾರಾಷ್ಟç, ಉತ್ತರ ಪ್ರದೇಶ, ಪಂಜಾಬ್ , ಕರ್ನಾಟಕದಲ್ಲಿ ಅತಿ ಹೆಚ್ಚು ಸಿಬಿಎಸ್‌ಇ ವಿದ್ಯಾರ್ಥಿಗಳಿದ್ದು, ಈ ರಾಜ್ಯಗಳಲ್ಲಿ ಕೊರೊನಾ ಸೋಂಕು ಉಲ್ಬಣಿಸುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಪಾಯಕಾರಿ ಎಂಬ ಮಾಹಿತಿಗಳು ಬಂದಿದ್ದವು. ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿ ಪರೀಕ್ಷೆಯನ್ನು ನಡೆಸುವ ಕುರಿತಂತೆ ತೀರ್ಮಾನ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ಮಾಸಿಕ ಪರೀಕ್ಷೆಗಳಲ್ಲಿ ತೆಗೆದುಕೊಂಡಿರುವ ಅಂಕಗಳನ್ನು ಪರಿಶೀಲಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಏ. 15ರಿಂದ ಪರೀಕ್ಷೆಗಳು ಆರಂಭಗೊಳ್ಳ ಬೇಕಾಗಿತ್ತು.
12ನೇ ತರಗತಿ ಪರೀಕ್ಷೆ ಬಗ್ಗೆ ಸದ್ಯದಲ್ಲಿಯೇ ದಿನಾಂಕ ವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಮೇ 4ರಿಂದ ಜೂ.1ರವರೆಗೆ ನಡೆಯಬೇಕಾಗಿದ್ದ 12ನೆ ತರಗತಿ ಪರೀಕ್ಷೆ ಈಗ ಮುಂದೂಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button