ನವದೆಹಲಿ, ಡಿ 30 (ಯುಎನ್‍ಐ):- ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪರೀಕ್ಷೆ 2021ರ ದಿನಾಂಕವನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಗುರುವಾರ ಸಂಜೆ 6 ಗಂಟೆಗೆ ಪ್ರಕಟಿಸಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಆತ್ಮೀಯ ವಿದ್ಯಾರ್ಥಿಗಳೇ ಮತ್ತು ಪೋಷಕರೇ, ಡಿ. 31ರಂದು 2021ರ ಸಿಬಿಎಸ್‍ಇ ಮಂಡಳಿ ಪರೀಕ್ಷೆಗಳ ಆರಂಭದ ದಿನಾಂಕವನ್ನು ಪ್ರಕಟಿಸಲಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಶಿಕ್ಷಕರೊಂದಿಗೆ ವಚ್ರ್ಯುವಲ್ ಮೂಲಕ ಸಂವಾದ ನಡೆಸಿದ ಅವರು, ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಸಲಹೆಗಳನ್ನು ಪಡೆದ ನಂತರ 2021ರ ಬೋರ್ಟ್ ಪರೀಕ್ಷೆಗಳನ್ನು ನಡೆಸಲು ಮಂಡಳಿ ಅಗತ್ಯ ಸಿದ್ಧತೆಗಳನ್ನು ಕ್ರಮಗಳನ್ನು ಕೈಗೊಂಡಿದೆ ಎಂದಿದ್ದರು.