ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ ಎಂದ ಸಿಎಂ

ಮೈಸೂರು,ಜ.23:- ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಡಕ್ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಲೈಸನ್ಸ್ ಇದ್ರೆ ಮಾತ್ರ ಗಣಿಗಾರಿಕೆ ನಡೆಸಬಹುದು ಎಂದು ಸ್ಪಷ್ಟಪಡಿಸಿದರು.
ನೀವೇನಾದರೂ ಗಣಿಗಾರಿಕೆ ನಡೆಸುತ್ತಿದ್ದಲ್ಲಿ ಪರವಾನಗಿಪಡೆಯಲು ಅರ್ಜಿ ಹಾಕಿಕೊಳ್ಳಿ ಎಂದೂ ಮುಖ್ಯಮಂತ್ರಿಯವರು ಹೇಳಿದ್ದಾರೆ. ಸಿಎಂ ಅವರ ಹೇಳಿಕೆ ಕುರಿತು ಕೆಲವರು ಅಪಸ್ವರ ವ್ಯಕ್ತಪಡಿಸಿದ್ದಾರೆ. ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡುವ ಬದಲು ಸಕ್ರಮಗೊಳಿಸುವ ಆಶಯ ಮುಖ್ಯಮಂತ್ರಿಯವರಿಗಿದೆಯೇ ಎಂದು ಕೆಲವರು ಪ್ರಶ್ನಿಸಿದ್ದಾರೆ.

Latest Indian news

Popular Stories