3 ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸಪೇಟೆ :ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದೆ. ಈ ಹಿನ್ನಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಲ್ಕು ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದೆ. ಇಂದು ಸಂಜೆ 7.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಹಂಪಿ ಉತ್ಸವಕ್ಕೆ ಸರ್ಕಾರ 14 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿಯೇ ಕಾರ್ಯಕ್ರಮದಲ್ಲಿ ಯಾವುದೇ ಚ್ಯುತಿ ಬಾರದಂತೆ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಜಿಲ್ಲೆಯ 137 ಗ್ರಾಮ ಪಂಚಾಯತಿಗಳಿಂದ ಉಚಿತವಾಗಿ ಬಸ್​ ಮೂಲಕ ಜನರನ್ನು ಕರೆತರುವ ವ್ಯವಸ್ಥೆ ಕೂಡ ಮಾಡಲಾಗಿದೆ.

ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌, ಶಾಸಕ ಗವಿಯಪ್ಪ, ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌, ತಂಗಡಗಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Latest Indian news

Popular Stories