Crime

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ: ಸುರ್ಜೇವಾಲಾ

ಬೆಂಗಳೂರು, ಸೆ.28(ಯುಎನ್‍ಐ):- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಕೆಪಿಸಿಸಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಕ್ಟೋಬರ್ 10 ರಂದು ರೈತ ಸಮಾವೇಶ ನಡೆಸಲಾಗುವುದು. ಅಕ್ಟೋಬರ್ 30 ರೊಳಗೆ ಬಿಜೆಪಿ ನೀತಿ ವಿರುದ್ಧ ದೇಶಾದ್ಯಂತ ಜನರಿಂದ 2 ಕೋಟಿ ಸಹಿ ಸಂಗ್ರಹಿಸಿ ಅದನ್ನು ಎಐಸಿಸಿ ನಾಯಕಿ ಸೋನಿಯಾಗಾಂಧಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಮೋದಿ ಹಾಗೂ ಯಡಿಯೂರಪ್ಪ ರೈತರ ಪರ ಕಾಯ್ದೆ ಜಾರಿಗೆ ತರುತ್ತಿದ್ದೇವೆ ಎಂದು ಹೇಳುತ್ತಿದ್ದರಾದರೂ ದೇಶದ ಎಲ್ಲ ರಾಜ್ಯಗಳಲ್ಲಿ ರೈತರ ಪ್ರತಿಭಟನೆ ನಡೆಯುತ್ತಿವೆ. ಪ್ರಧಾನಿ ಮೋದಿ ದೇಶದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಈ ಕಾಯ್ದೆ ಜಾರಿಯಾದರೆ ಕೇವಲ ಸಿರಿವಂತರಷ್ಟೇ ಭೂಮಿ ಖರೀದಿಸುತ್ತಾರೆ. ಆಗ ರೈತರು ಎಲ್ಲಿಗೆ ಹೋಗಬೇಕು. ರೈತರಿಗೆ ಬೆಂಬಲ ಬೆಲೆ ಕೊಡುತ್ತೇವೆಂದು ಮೋದಿ ಹಸಿಸುಳ್ಳು ಹೇಳುತ್ತಿದ್ದಾರೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button