Crime

ಕಾಂಗ್ರೆಸ್​ ಸರ್ಕಾರವು ಪೇಪರ್​ ಲೀಕ್​ ಮಾಫಿಯಾದ ಮೂಲಕ ಲಕ್ಷಾಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ – ಮೋದಿ

ಜೈಪುರ: ರಾಜ್ಯ ಕಾಂಗ್ರೆಸ್​ ಸರ್ಕಾರವು ಪೇಪರ್​ ಲೀಕ್​ ಮಾಫಿಯಾದ ಮೂಲಕ ಲಕ್ಷಾಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ತವರು ಜಿಲ್ಲೆ ಜೋಧ್​ಪುರದಲ್ಲಿ ಐದು ಸಾವಿರ ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಂಪು ಡೈರಿಯ ವಿಚಾರವನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಒಂದು ವೇಳೆ ಅದರು ಹೊರಬಂದರೆ ಕಾಂಗ್ರೆಸ್​ ಸರ್ಕಾರದ ಕರ್ಮಕಾಂಡ ಬಯಲಾಗುತ್ತದೆ. ಅದನ್ನು ಬಯಲಿಗೆಳೆಯಲು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ ಎಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button