ಕಾರವಾರ : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಗುರುವಾರ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ರ ಪ್ರತಿಮಗೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಈ ದೇಶದ ಎಲ್ಲಾ ಜನರು ತಲೆ ಎತ್ತಿ ಬದುಕುವ ಅವಕಾಶವನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟರು. ಸಂವಿಧಾನ ನಾವು ಗೌರವಿಸುವ ಮತ್ತು ಅನುಸರಿಸುವ ಗ್ರಂಥ. ಸರ್ಕಾರ ನಡೆಯುವುದೇ ಸಂವಿಧಾನದ ಆಚರಣೆ ಮೂಲಕ ಎಂದರು.
ಮತ ಮೌಲ್ಯ ತಂದು ಕೊಟ್ಟ ಅಂಬೇಡ್ಕರ್ ಎಲ್ಲರಿಗೂ ಒಂದೇ ಮತ .ಅದೇ ಸಮಾನತೆ ಸಾರುವ ದೊಡ್ಡ ಸಂದೇಶ ಎಂದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
…….