Crime

ಜಿಲ್ಲೆಯಲ್ಲಿಂದು 101 ಕೋವಿಡ್-19 ದೃಢ

ರಾಯಚೂರು,ಸೆ30:- ಜಿಲ್ಲೆಯಲ್ಲಿ ಸೆ.30ರ ಬುಧವಾರ ಕೋವಿಡ್-19ನ 101 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದೂವರೆಗೆ 11,393 ಮಂದಿಗೆ ಕೊರೋನಾ ಸೋಂಕು ವರದಿಯಾಗಿದೆ. ಅವರಲ್ಲಿ ಇಂದು 120 ಜನರು ಸೇರಿದಂತೆ ಇದೂವರೆಗೆ ಒಟ್ಟಾರೆ 9,713 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲೂಕಿನಿಂದ 142, ಲಿಂಗಸೂಗೂರು ತಾಲೂಕಿನಿಂದ 112, ಮಾನ್ವಿ ತಾಲೂಕಿನಿಂದ 163, ಸಿಂಧನೂರು ತಾಲೂಕಿನಿಂದ 180 ಮತ್ತು ರಾಯಚೂರು ತಾಲೂಕಿನಿಂದ 216 ಸೇರಿದಂತೆ ಒಟ್ಟು 819 ಜನರ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಇಂದು ಬಂದ ವರದಿಗಳಲ್ಲಿ 1,369 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 1,15,292 ಜನರ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 1,02,727 ವರದಿಗಳು ನೆಗೆಟಿವ್ ಆಗಿವೆ. ಉಳಿದ 353 ಸ್ಯಾಂಪಲ್‍ಗಳ ಫಲಿತಾಂಶ ಬರಬೇಕಿದೆ. ಫಿವರ್ ಕ್ಲಿನಿಕ್‍ಗಳಲ್ಲಿಂದು 512 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿ 23, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿ 10 ಹಾಗೂ ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿ 15 ಹಾಗೂ ದೇವದುರ್ಗ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿ 8 ಜನರು ಸೇರಿದಂತೆ ಒಟ್ಟು 69 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button