Crime

ಇಂದಿನಿಂದ ಕೋವಿಶೀಲ್ಡ್ ಲಸಿಕೆ ನೀಡಿಕೆ

ಬೀದರ್,ಜ.15:- ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಬಲ ಇಚ್ಛಾಶಕ್ತಿಯ ಪರಿಣಾಮವಾಗಿ ದಿ. 16 ರಿಂದ ದೇಶಾದ್ಯಂತ ಕೋವಿಡ್-19 ವಿರುದ್ಧದ ಲಸಿಕೆ ನೀಡಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಬೀದರನಲ್ಲಿಯೂ ಕೂಡ ಬ್ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಎಲ್ಲ ತಾಲೂಕು ಕೇಂದ್ರಗಳಲ್ಲಿಯೂ ಮೊದಲ ಹಂತದ ಕೋವಿಶೀಲ್ಡ ಲಸಿಕೆ ನೀಡಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ಅವರು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯ ಮೊದಲ ಹಂತದಲ್ಲಿ ಒಟ್ಟು 10240 ಕೊರೊನಾ ವಾರಿಯರ್ಸ್ ಲಸಿಕೆ ನೀಡುವ ಕಾರ್ಯಕ್ರಮವಿದ್ದು, ಈಗಾಗಲೇ 5500 ಡೋಸ್ ಲಸಿಕೆಗಳು ಬೀದರಗೆ ಬಂದಿವೆ. ಉಳಿದ ಲಸಿಕೆಗಳು ಇನ್ನೊಂದು ವಾರದಲ್ಲಿ ಬರಲಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆ ನೀಡಿದ ನಂತರ ಮೊದಲ ಸಾಲಿನ ಇತರ ಕೊರೊನಾ ಸೇನಾನಿಗಳಾದ ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ನೀಡಿದ ನಂತರ ಉಳಿದ ಇಲಾಖೆ ಮತ್ತು ಸಾರ್ವಜನಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಮುಂದುವರೆಸಲಾಗುವುದು.
ಜಿಲ್ಲೆಯಲ್ಲಿ ಒಟ್ಟು 72 ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, ಮೊದಲನೇ ಹಂತದಲ್ಲಿ 6 ಕೇಂದ್ರಗಳಲ್ಲಿ ಪ್ರತಿ ಕೇಂದ್ರದಲ್ಲಿ ತಲಾ 100 ಜನ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಸಾರ್ವಜನಿಕರು ಇನ್ನು ಮುಂದೆ ಯಾವುದೇ ರೀತಿಯಲ್ಲೂ ಆತಂಕ ಪಡಬೇಕಾಗಿಲ್ಲ, ಆದಾಗ್ಯೂ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಮುಂದುವರೆಸಬೇಕೆಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button