ಕರಾವಳಿಯಲ್ಲಿ ಭೀತಿ ಹುಟ್ಟಿಸಿದ್ದ ಚಡ್ಡಿ ಗ್ಯಾಂಗ್ ಪೊಲೀಸರ ವಶಕ್ಕೆ!

ಮಂಗಳೂರು: ಮಂಗಳೂರಿನ ಎರಡು ಕಡೆಗಳಲ್ಲಿ ಕಳ್ಳತನ, ದರೋಡೆ ನಡೆಸಿರುವ ಶಂಕಿತ ಚಡ್ಡಿ ಗ್ಯಾಂಗನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನ ಕೋಟೆಕಣಿಯಲ್ಲಿ ಮನೆಯವರಿಗೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿ ಅದೇ ಮನೆಯ ಕಾರಿನಲ್ಲಿ ಮೂಲ್ಕಿಯವರೆಗೆ ಹೋಗಿದ್ದ ದರೋಡೆಕೋರರು ಅಲ್ಲಿಂದ ಮಂಗಳೂರಿಗೆ ಬಸ್ ನಲ್ಲಿ ಬಂದು ಬಳಿಕ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಸಕಲೇಶಪುರದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಮಂಗಳೂರು ಪೊಲೀಸರು ಬಿರುಸಿನ ಬಲೆ ಬಿಸಿದ್ದು ಕೇವಲ 24 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಮಧ್ಯಪ್ರದೇಶದ ವಿವಾಸಿಗಳಾಗಿದ್ದು ರಾಜು (24 ವರ್ಷ), ಸಿಂಗ್ವಾನಿಯ,ಮಯೂರ್ 30 ವರ್ಷ),ಬಾಲಿ (22 ವರ್ಷ),ವಿಕ್ಕಿ (21 ವರ್ಷ) ಎಂದು ತಿಳಿದುಬಂದಿದೆ.

ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಸದರಿ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಆರೋಪಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದು ಆ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದರು ಅವರ ಮಾಹಿತಿಯಂತೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದ ಪೊಲೀಸರು ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದ್ದಾರೆ. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಅವರು ಕೃತ್ಯವೆಸಗಿದ ಬಗ್ಗೆ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಅವರನ್ನು ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಅಮಾನತ್ತು ಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ.

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ರವರು ಸಹಕರಿಸಿದ್ದಾರೆ .

IMG 20240709 WA0098 Crime, Featured Story IMG 20240709 WA0097 Crime, Featured Story

 

 

1001388054 Crime, Featured Story

Latest Indian news

Popular Stories