Crime

ಎಲ್ಲಾ ಎಟಿಎಂ ಅವರದ್ದೇ ಜನ ತೀರ್ಪು ಕೊಟ್ಟಿದ್ದಾರೆ – ಬಿಜೆಪಿ ವಿರುದ್ಧ ಡಿ. ಕೆ. ಶಿ ಟಾಂಗ್

ಬೆಂಗಳೂರು: ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ್ದ ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದು, ಎಲ್ಲಾ ಎಟಿಎಂ ಅವರದ್ದೇ ಜನ ತೀರ್ಪು ಕೊಟ್ಟಿದ್ದಾರೆ ಸದ್ಯಕ್ಕೆ ಅವರ ಬಣ್ಣ ಬಯಲಾಗುತ್ತೆ ಎಂದಿದ್ದಾರೆ.

ರಾಜ್ಯದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾಗಿದೆ. ಬಿಜೆಪಿ ನಾಯಕರು, ಮುಖಂಡರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಹಾಗಾಗಿ ಬಿಜೆಪಿ ನಾಯಕರು ಇಂತಹ ಆರೋಪ ಮಾಡುತ್ತಿದ್ದಾರೆ.ಮುಂದಿನ ದಿನಗಳಲ್ಲೂ ಈ ಕೆಲಸ ಮುಂದುವರಿಸಿಕೊಂಡು ಹೋಗುತ್ತೇವೆ. ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button