ಬಂಟ್ವಾಳ್: ಬೈಕ್ ಗೆ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ ಉಡುಪ (58)(ಬಾಬು)ಎಂದು ಗುರುತಿಸಲಾಗಿದೆ.
ವಾಮದಪದವನಿಂದ ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು,ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ ಉಡುಪರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.