ಬುಲ್ಡಾಣಾ: ಹೆದ್ದಾರಿ ಪಕ್ಕದ ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು 5 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ಡಾಣಾ ಜಿಲ್ಲೆಯಿಂದ ವರದಿಯಾಗಿದೆ.
ಬೆಳಿಗ್ಗೆ 5.30ರ ಸುಮಾರಿಗೆ ಹೆದ್ದಾರಿ ಪಕ್ಕದ ಗುಡಿಸಿಲಿನಲ್ಲಿ ಕಾರ್ಮಿಕರು ಮಲಗಿದ್ದಾರೆ ಎನ್ನಲಾಗಿದೆ.ಘಟನಾ ಸ್ಥಳದಲ್ಲೇ ಮೂವರು ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಇನ್ನೂ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.