ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ಮಾಡುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿ 10 ಮಂದಿ ವಲಸಿಗರು ದಾರುಣ ಸಾವನ್ನಪ್ಪಿದ್ದು 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಲಸಿಗರನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಟ್ರಕ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ. ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಮಗು ಸೇರಿದಂತೆ 10 ಮಂದಿ ವಲಸಿಗರು ಮೃತಪಟ್ಟಿದ್ದಾರೆ. ಗಾಯಗೊಂಡ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.