ಹುಣಸೂರು :ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ರೈತ ಬಲಿ

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರು ಬಲಿಯಾಗಿದ್ದಾರೆ.

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ಲೇ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ.

ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು ತತ್ ಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಅವರೊಟ್ಟಿಗೆ ಅರಣ್ಯದಲ್ಲಿ ಹುಡುಕಾಟ ನಡೆಸಿದ ವೇಳೆ ಮುದ್ದನಹಳ್ಳಿ ಅರಣ್ಯದ ಬಫರ್ ಏರಿಯಾದ ಪ್ರದೇಶದ ಕೆರೆ ಬಳಿ ಗಣೇಶ್‌ರ ಶವ ಪತ್ತೆಯಾಗಿದೆ.

Latest Indian news

Popular Stories