ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ ; ಆರೋಪಿ ವಶಕ್ಕೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಹಾಕಲಾಗಿತ್ತು.

ವ್ಯಂಗ್ಯವಾಗಿ ಹಾಕಿದ್ದಷ್ಟೇ ಆಗಿದ್ದರೆ ಯಾವುದೇ ಸಮಸ್ಯೆ ಆಗುತ್ತಿರಲಿಲ್ಲ. ಆದರೆ, ಆ ಪೋಸ್ಟ್‌ನಲ್ಲಿ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು. ಇದು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಕಾರ್ಯಾಚರಣೆ, ಮುಖಂಡರ ಮನವಿಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೂ ವಾತಾವರಣ ಬೂದಿಮುಚ್ಚಿದ ಕೆಂಡದಂತಿದೆ.

Latest Indian news

Popular Stories