ಗ್ರಾಮಸ್ಥರ ವಿರೋಧದ ನಡುವೆಯೂ ಹನುಮಧ್ವಜ ತೆರವುಗೊಳಿಸಿದ ಪೊಲೀಸರು

ಮಂಡ್ಯ: ಗ್ರಾಮಸ್ಥರ ತೀವ್ರ ವಿರೋಧ, ಪ್ರತಿಭಟನೆ ನಡುವೆಯೂ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು.

ಇದೀಗ ಧ್ವಜ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಧ್ವಜ ತೆರವು ಮಾಡದಂತೆ ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು.

ದ್ವಜ ಕಟ್ಟೆಯನ್ನು ಸುತ್ತುವರೆದಿದ್ದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದರು. ಅಲ್ಲದೇ ಗ್ರಮದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು.

ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಇದೀಗ ಪೊಲೀಸರು 108 ಅಡಿ ಎತ್ತರದಲ್ಲಿದ್ದ ಬೃಹತ್ ಹನುಮ ಧ್ವಜವನ್ನು ಕೆಳಗಿಳಿಸಿ ತೆರವುಗೊಳಿಸಿದ್ದಾರೆ.

Latest Indian news

Popular Stories