Crime

ಮಹಾಜನ್ ವರದಿಯೇ ಅಂತಿಮ ಎಂದ ಡಿಕೆಶಿ

ಕಲಬುರ್ಗಿ,ಜ. 18:- ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ ಗಡಿಯಲ್ಲಿರುವ ಎಲ್ಲ ಪ್ರದೇಶಗಳು ಕರ್ನಾಟಕಕ್ಕೆ ಸೇರಿವೆ. ಈ ಸಂಬಂಧ ಮಹಾಜನ್ ವರದಿಯೇ ಅಂತಿಮ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಇಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈ ಸಂಬಂಧ ಅನಗತ್ಯ ವಿವಾದ ಉಂಟು ಮಾಡುತ್ತಿದ್ದಾರೆ. ಬೆಳಗಾವಿ ನಮ್ಮದು ಎಂದು ಹೇಳುವ ಉದ್ದೇಶದಿಂದಲೇ ಬೆಳಗಾವಿಯಲ್ಲಿ ಸುವರ್ಣ ಸೌಧವನ್ನು ನಿರ್ಮಿಸಲಾಗಿದೆ ಎಂದರು.
ಬಿಜೆಪಿ ಶಾಸಕರೇ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಿಡಿ ವಿಚಾರ ಅಧಿವೇಶನದಲ್ಲಿ ಚರ್ಚಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಿಡಿಯ ಬಗ್ಗೆ ಕೆಲ ವಿಚಾರಗಳಗಳು ನನಗೂ ಗೊತ್ತು. ಅದನ್ನೆಲ್ಲಾ ಅಧಿವೇಶನ ಸಂದರ್ಭದಲ್ಲಿ ನೋಡೋಣ ಎಂದು ಹೇಳಿದರು.
ನೆಲ-ಜಲ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿ ನಿರ್ಧಾರ ಹೊಂದಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಹೊಂದಾಣಿಕೆ ಮಾಡಿಕೊಂಡಿರಬಹುದು. ಆದರೆ ನಾಡಿನ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ ವರದಿಯೇ ಅಂತಿಮ ಎಂದು ಪುನರುಚ್ಚರಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button