Crime

ಬಿಜೆಪಿ ಮುಕ್ತಿಗಾಗಿ ಮತ್ತೊಂದು ಸ್ವಾತಂತ್ರ್ಯ ಹೋರಾಟ: ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ.28(ಯುಎನ್‍ಐ):- ಇತಿಹಾಸ ಸೃಷ್ಟಿಸಿದ್ದು ಕಾಂಗ್ರೆಸ್. ಇತಿಹಾಸವನ್ನು ಕಿತ್ತುಕೊಳ್ಳುವುದು ಬಿಜೆಪಿ. ಅಂದು ಬ್ರಿಟಿμï ರಿಂದ ಮುಕ್ತಿ ಹೊಂದಲು ಹೋರಾಟ ಮಾಡಿದ ಮಾದರಿಯಲ್ಲಿಯೇ ಪ್ರಸಕ್ತ ಬಿಜೆಪಿ ಸರ್ಕಾರಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ದೇಶನ ಮೇರೆಗೆ ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ ತಿದ್ದುಪಡಿ ವಿರುದ್ಧ ಕೆಪಿಸಿಸಿ ನಾಯಕರು ಪ್ರತಿಭಟಿಸಿದರು.
ಹಸಿರು ಶಾಲು ಹಾಕಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಬಿಜೆಪಿ ಸರ್ಕಾರಗಳ ವಿರುದ್ಧ ಧ್ವನಿಯಾದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ,ಎಸ್ ಆರ್ ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಎಚ್.ಮುನಿಯಪ್ಪ, ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಎಂ. ಪಿ. ಉಗ್ರಪ್ಪ, ಧ್ರುವನಾರಾಯಣ್, ಶಾಸಕ ಕೃಷ್ಣ ಬೈರೇಗೌಡ, ಯು ಟಿ ಖಾದರ್, ಮಾಜಿ ಸಚಿವೆ ಉಮಾಶ್ರೀ, ಜಯಮಾಲಾ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button