ಮಡಿಕೇರಿಯಲ್ಲಿ ರಸ್ತೆಗಿಳಿದ ಪೊಲೀಸರು ಮಡಿಕೇರಿಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ಕೇಸ್ | ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಹಲವರಿಂದ ದಂಡ ವಸೂಲಿ

ಮಡಿಕೇರಿಯಲ್ಲಿ ಮಂಗಳವಾರ ರಾತ್ರಿ ರಸ್ತೆಗಿಳಿದ ಸಂಚಾರಿ ಪೊಲೀಸರು ವಿರಾಜಪೇಟೆ ರಸ್ತೆಯಲ್ಲಿ ತೆರಳುವ ವಾಹನಗಳನ್ನು ತಡೆದು ಮದ್ಯಪಾನ ಸೇವಿಸಿ ವಾಹನ ಚಲಾಯಿಸಿದ ಹಲವು ಚಾಲಕರ ಮೇಲೆ ದಂಡ ವಿಧಿಸಿದ್ದಾರೆ. ಜಿಲ್ಲೆಯಲ್ಲಿ ಮದ್ಯಪಾನ ಸೇವೆನೆಯಿಂದ ಅಫಘಾತವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಮದ್ಯಪಾನ ಸೇವಿಸಿ ವಾಹನ ಚಲಾಯಿಸುವುದು ಮತ್ತು ಅಪಘಾತಗಳ ಸಂಖ್ಯೆ ಜಾಸ್ತಿಯಾಗಿರುವುದು ಕೂಡ ಕಂಡಿಬಂದಿದೆ. ಅಲ್ಲದೆ ದ್ವೀಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುವುದು ಪಾದಚಾರಿಗಳ ಮೇಲೆ ವಾಹನ ಹರಿಯಬಿಡಲು ಪ್ರಯತ್ನಿಸುವುದು ಮತ್ತು ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಮದ್ಯಪಾನ ಮಾಡುವುದು ಸಾರ್ವಜನಿಕರ ದೂರಿನ ಮೇರೆಗೆ ಇಲಾಖೆ ಗಮನಕ್ಕೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲು ರಾತ್ರಿ ವೇಳೆ ಮದ್ಯಪಾನ ಸೇವಿಸಿ ವಾಹನ ಚಲಾಯಿಸುವ ಚಾಲಕರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಕೊಡಗು ಎಸ್ ಪಿ ಕೆ ರಾಮರಾಜನ್ ಹೇಳಿದರು

Latest Indian news

Popular Stories