Crime
ಶಿರಾ, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನ. 3 ರಂದು ಚುನಾವಣೆ, ಪರಿಷತ್ತಿನ 4 ಕ್ಷೇತ್ರಕ್ಕೆ ಅ. 28 ಕ್ಕೆ ಮತದಾನ ; ಶೀಘ್ರವೇ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ
ನವದೆಹಲಿ, ಸೆ, 29(ಯುಎನ್ಐ):- ರಾಜ್ಯದ ಶಿರಾ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ. ನವೆಂಬರ್ 3 ರಂದು ಮತದಾನಕ್ಕೆ ಮುಹೂರ್ತ ನಿಗದಿಯಾಗಿದ್ದು, ನ. 10 ರಂದು ಫಲಿತಾಂಶ ಪ್ರಕಟವಾಗಲಿದೆ.
ವಿಧಾನಸಭೆಯಿಂದ ತೆರವಾಗಿರುವ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಿಗೂ ಸಹ ಶೀಘ್ರ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿದೆ. ಇದಲ್ಲದೇ ಕರ್ನಾಟಕದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮುಂದಿನ ತಿಂಗಳ 28 ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದ್ದು, ಅ. 1 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.




