
Crime
ಕೋಯಿಕ್ಕೋಡ್ ರೈಲು ನಿಲ್ದಾಣದಲ್ಲಿ ಸ್ಫೋಟಕ ಪತ್ತೆ
ಕೋಯಿಕ್ಕೋಡ್,ಫೆ.26:- ಕೇರಳದ ಕೋಯಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್ಪ್ರೆಸ್ ರೈಲಿನಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಂಡ ಪೆÇಲೀಸರು ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಯಿಕ್ಕೋಡ್ ನಿಲ್ದಾಣದಲ್ಲಿ ರೈಲ್ವೆ ಭದ್ರತಾ ಪಡೆ (ಆರ್ಪಿಎಫ್) ಸಿಬ್ಬಂದಿ ಇಂದು ಬೆಳಗ್ಗೆ ತಪಾಸಣೆ ನಡೆಸಿದ ವೇಳೆ 117 ಜಿಲೆಟಿನ್ ಕಡ್ಡಿಗಳು ಹಾಗೂ 350 ಡೆಟೋನೇಟರ್ಗಳು ಪತ್ತೆಯಾಗಿವೆ.
ಈ ಸ್ಫೋಟಕಗಳನ್ನು ರೈಲಿನ ಸೀಟಿನ ಕೆಳಗೆ ಅಡಗಿಸಿಟ್ಟು ಸಾಗಿಸಲಾಗುತ್ತಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಮೂಲದ ರಮಣಿ ಎಂಬ ಆರೋಪಿಯನ್ನು ಆರ್ಪಿಎಫ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.




