ಉಡುಪಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳ ಉಚ್ಚಾಟನೆ

ಉಡುಪಿ, ಮೇ 30: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಛಾಚನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

IMG 20240530 WA0048 Crime IMG 20240530 WA0049 Crime IMG 20240530 WA0047 Crime

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್ ಶೆಟ್ಟಿ ಮತ್ತು ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಬಂಡಾಯ ಅಭ್ಯರ್ಥಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ 48 ಗಂಟೆಗಳ ಒಳಗಾಗಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣವನ್ನು ನೀಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.
ಇದರಲ್ಲಿ ಕೆಲವರು ಉತ್ತರ ಕೊಟ್ಟಿದ್ದಾರೆ. ಆದರೆ ಅವರ ಸಬೂಬು ನಮ್ಮ ನೋಟೀಸ್‌ಗೆ ಸರಿಯಾದ ಉತ್ತರ ಆಗಿಲ್ಲ. ಆದುದರಿಂದ ಅವರ ಹೇಳಿಕೆಯನ್ನು ಪರಿಗಣಸದೆ ನೋಟೀಸ್ ಜಾರಿ ಮಾಡಿದ ನಾಲ್ವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಿ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ

Latest Indian news

Popular Stories