Crime

ತುಮಕೂರು :ಕೆರೆಗೆ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ತುಮಕೂರು :ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೆರೆಗೆ ಸಾಫ್ಟ್‌ವೇರ್ ಎಂಜಿನಿಯರ್ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿ ಸುಮಾ ಎಂದು ಗುರುತಿಸಲಾಗಿದೆ.

ಸುಮಾ ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಆಗಿದ್ದಾಳೆ. ಬಸ್ ಬಂದು ಸುಮಾರು ಹೊತ್ತು ಕಳೆದರೂ ಮಗಳು ಇನ್ನು ಬರಲಿಲ್ಲ ಎಂದು ಪೋಷಕರು ಗಾಬರಿಗೆ ಒಳಗಾಗಿದ್ದಾರೆ.ಈ ವೇಳೆ ಹುಡುಕಾಟ ನಡೆಸಿದಾಗ ಗ್ರಾಮದ ಕೆರೆಯ ಬಳಿ ಸುಮಾಳ ಬ್ಯಾಗ್ ಮೊಬೈಲ್ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ.

ಸದ್ಯ ಸುಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆ ದೊಡ್ಡಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಸಹ ಅಗ್ನಿಶಾಮಕ ದಳ ಸಿಬ್ಬಂದಿಗಳಿಗೆ ಸಹಕಾರ ನೀಡಿದ್ದು, ಸುಮಾಳ ಮೃತ ದೇಹಕ್ಕಾಗಿ ಇದೀಗ ಶೋಧ ಕಾರ್ಯ ಮುಂದುವರೆದಿದೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button