ಪಿಎಸ್‌ಐ ವಿರುದ್ಧ ಎಫ್‌ಐಆರ್

ಕಲಬುರ್ಗಿ: ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬAಧಿಸಿದAತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪಿಎಸ್‌ಐ ನಾಡಗೌಡ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 47 ಜಾನುವಾರುಗಳನ್ನು ಸೇಡಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಜಾನುವಾರುಗಳನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ನಂದಿ ಅನಿಮಲ್ ವೆಲ್ಫೇರ್ ಸೊಸೈಟಿ ಹುಣಚಿರಾಯ್ ಮೋಟಗಿ ಅವರ ಗೋಶಾಲೆಗೆ ನೀಡಲಾಗಿತ್ತು. ಈ ಪೈಕಿ ಒಂದು ಜಾನುವಾರು ಮೃತಪಟ್ಟಿತ್ತು. ಇದೇ ವಿಚಾರವಾಗಿ ಪಿಎಸ್‌ಐ ನಾಡಗೌಡ, ಹುಣಚಿರಾಯ್ ಮೋಟಗಿಯವರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಈ ಕುರಿತು ಹುಣಚಿರಾಯ್ ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ನಾಡಗೌಡ ವಿರುದ್ಧ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.

Latest Indian news

Popular Stories

error: Content is protected !!