ದಿಲ್ಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ 2 ವರ್ಷಗಳ ನಂತರ ಜಾಮೀನು

ಹೊಸದಿಲ್ಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಆರೋಗ್ಯ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ಜೈನ್ ಅವರನ್ನು ಎರಡು ವರ್ಷಗಳ ಹಿಂದೆ ಜಾರಿ ನಿರ್ದೇಶನಾಲಯ (ಈಡಿ)ಯು ಬಂಧಿಸಿತ್ತು.

ವೈದ್ಯಕೀಯ ಕಾರಣಗಳಿಗಾಗಿ ಮೇ 2023 ರಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಈ ವರ್ಷದ ಮಾರ್ಚ್‌ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು.

ಸತ್ಯೇಂದ್ರ ಜೈನ್ ಅವರು ಇತ್ತೀಚಿನ ದಿನಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆದ ಮೂರನೇ ಎಎಪಿ ನಾಯಕರಾಗಿದ್ದಾರೆ.

Latest Indian news

Popular Stories