ಕಲಬುರಗಿ.ಡಿ.02.(ಕ.ವಾ)-2020 ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 2020ರ ಡಿಸೆಂಬರ್ 22 ಹಾಗೂ ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಈ ಚುನಾವಣೆ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ (ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಭಾರತ ರಿಸರ್ವ್ ಬ್ಯಾಂಕ್ ರವರಿಂದ ಅನುಮೋದಿತ ಶೆಡ್ಯೂಲ್ ಬ್ಯಾಂಕ್‍ಗಳ ಸೆಕ್ಯೂರಿಟಿ ಗಾರ್ಡ್‍ಗಳ ಆಯುಧಗಳನ್ನು ಹೊರತುಪಡಿಸಿ) ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಆಯುಧ (ಫೈರ ಆಮ್ರ್ಸ್) ಗಳನ್ನು ಹೊಂದಿರುವವರು ಚುನಾವಣಾ ಪ್ರಕ್ರಿಯೇ ಮುಗಿಯುವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ತಮ್ಮ (ಫೈರ್ ಆಮ್ರ್ಸ್) ಆಯುಧಗಳನ್ನು ಠೇವಣಿ ಇಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಭಾರತೀಯ ಆಯುಧ ಕಾಯ್ದೆ-1959ರ ಕಲಂ 24 ಎ(1) ರಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಯಾವುದೇ ಆಯುಧ ಲೈಸೆನ್ಸ್‍ದಾರರು ತಮ್ಮ ಆಯುಧಗಳನ್ನು ಸಾರ್ವಜನಿಕ ಸ್ಥಳದಲ್ಲಿ ಹೊತ್ತು ಒಯ್ಯುವುದನ್ನು ಹಾಗೂ ಪ್ರದರ್ಶನ ಮಾಡುವುದನ್ನು 2020ರ ಡಿಸೆಂಬರ್ 31 ರವರೆಗೆ ನಿಷೇಧಿಸಲಾಗಿದೆ ಎಂದು ತಮ್ಮ ಆದೇಶದಲ್ಲಿ ಅವರು ತಿಳಿಸಿದ್ದಾರೆ.