ಗುಂಡ್ಲುಪೇಟೆ: ₹4,04,000 ಲೆಕ್ಕ ರಹಿತ ಹಣ ವಶ

ಚಾಮರಾಜನಗರ, ಮಾರ್ಚ್‌, 29: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನು ಗುಂಡ್ಲುಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಮದ್ದೂರು ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ದಾಖಲೆ ರಹಿತ ನಗದನ್ನ ವಶಪಡಿಸಿಕೊಳ್ಳಲಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇರಳ ಮತ್ತು ತಮಿಳುನಾಡು ಗಡಿಯಲ್ಲಿ ಪೊಲೀಸರು ಚುರುಕಿನ ತಪಾಸಣೆ ಕೈಗೊಂಡಿದ್ದರು.

ಇನ್ನು ಇಂದು ಬೆಳೆಗ್ಗೆ ಮದ್ದೂರು ಚೆಕ್ಪೋಸ್ಟ್‌ನಲ್ಲಿ ದಾಖಲೆ ರಹಿತವಾಗಿ ಸಾಗಿಸಲಾಗುತ್ತಿದ್ದ 4 ಲಕ್ಷದ ನಾಲ್ಕು ಸಾವಿರ ಹಣವನ್ನ ಗುಂಡ್ಲುಪೇಟೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಪಿಐ ಪರಶಿವಮೂರ್ತಿ ನೇತೃತ್ವದಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಅಕ್ರಮಗಳಿಗೆ ಬ್ರೇಕ್ ಹಾಕಲಾಗುತ್ತಿದೆ.

Latest Indian news

Popular Stories