ನವದೆಹಲಿ: ಛತ್ತೀಸ್ಗಢದ ಸುಕ್ಮಾ-ಬಿಜಾಪುರ ಗಡಿಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ಮಂಗಳವಾರ ವರದಿ ಮಾಡಿದೆ.
ನಕ್ಸಲ್ ಚಟುವಟಿಕೆಯನ್ನು ಪರಿಶೀಲಿಸಲು, ಬಿಜಾಪುರ-ಸುಕ್ಮಾ ಗಡಿಯಲ್ಲಿರುವ ಟೇಕಲ್ಗುಡೆಮ್ ಎಂಬ ಹಳ್ಳಿಯಲ್ಲಿ ಇಂದು ಹೊಸ ಭದ್ರತಾ ಶಿಬಿರವನ್ನು ಸ್ಥಾಪಿಸಿದ್ದರು, ಇದೇ ವೇಳೇ ಶಿಬಿರವನ್ನು ಸ್ಥಾಪಿಸಿದ ನಂತರ, ಜೋನಗುಡಾ-ಅಲಿಗುಡ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಕೋಬ್ರಾ / ಎಸ್ಟಿಎಫ್ / ಡಿಆರ್ಜಿ ಪಡೆಯ ಮೇಲೆ ಮಾವೋವಾದಿಗಳು ಗುಂಡು ಹಾರಿಸಿದರು.
ಎನ್ಕೌಂಟರ್ ನಂತರ, ಮಾವೋವಾದಿಗಳು ಕಾಡಿನಲ್ಲಿ ಅಡಗಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.ಗಾಯಗೊಂಡ ಎಲ್ಲಾ 14 ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯ್ಪುರಕ್ಕೆ ವಿಮಾನದಲ್ಲಿ ಕರೆದೊಯ್ಯಲಾಯಗಿದೆ ಎನ್ನಲಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಎಡಪಂಥೀಯ ಉಗ್ರವಾದ (ಎಲ್ಡಬ್ಲ್ಯೂಇ) ಕುರಿತು ಎಲ್ಲಾ ಪಾಲುದಾರರೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅಲ್ಲಿ ಅವರು ಮುಂದಿನ ಮೂರು ವರ್ಷಗಳಲ್ಲಿ ಮಾವೋವಾದಿ ಬೆದರಿಕೆ ಕೊನೆಗೊಳ್ಳಬೇಕು ಎಂದು ಹೇಳಿದರು.