Crime

ಗುರಿ ತಲುಪಲು ನಿರಂತರ ಅಧ್ಯಯನ ಸಹಕಾರಿ – ದುರಗೇಶ

ರಾಯಚೂರು,ಸೆ30:- ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿದರೆ ನಿಗದಿತ ಗುರಿ ಸಾಧಿಸಲು ಸಾಧ್ಯ, ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಲಹೆ ನೀಡಿದರು.
ಅವರು ಸೆ.30ರ ಬುಧವಾರ ನಗರದ ಜಿಲ್ಲಾ ರಂಗಮಂದಿರದಲ್ಲಿ ರಾಯಚೂರು ವಿಭಾಗದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರದ ಆಯ್ಕೆ, ಸ್ಪೂರ್ತಿ, ಪ್ರೇರಣೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಒಂದು ದಿನದ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಐಎಎಸ್, ಐಪಿಎಸ್, ಕೆಎಎಸ್, ಪಿಎಸ್‍ಐ ಸೇರಿದಂತೆ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿವೆ, ಅವುಗಳಲ್ಲಿ ಆಯ್ಕೆ ಮಾಡಿಕೊಂಡ ವಿಷಯಗಳನ್ನು ಪ್ರತಿ ನಿತ್ಯ 6 ರಿಂದ 8 ಗಂಟೆ ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು, ಆಗ ಮಾತ್ರ ಯಶಸ್ಸು ಸಾಧ್ಯ, ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳೊಂದಿಗೆ, ಪಠ್ಯೇತರ ಚಟುವಟಿಕೆಯಲ್ಲಿಯೂ ತೊಡಗಿಸಿಕೊಳ್ಳಬೇಕು, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಮುನ್ನ ದೇಶದ ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳಲು ಪತ್ರಿಕೆ, ಪುಸ್ತಕ, ವಾರ ಹಾಗೂ ಮಾಸ ಪತ್ರಿಕೆಯನ್ನು ಪ್ರತಿನಿತ್ಯ ಅಧ್ಯಯನ ಮಾಡಬೇಕು, ಓದಿದ ಮೇಲೆ ಆಗಾಗ್ಯೆ ಅದನ್ನು ಪುನಾರಾವರ್ತಿಸಿಕೊಳ್ಳಬೇಕು ಎಂದರು.
ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳ ಮುಖ್ಯ ಪರೀಕ್ಷೆಗೆ ಉತ್ತಮ ಬರವಣಿಗೆ ಶೈಲಿಯನ್ನು ರೂಢಿಸಿಕೊಳ್ಳಬೇಕು, ಪ್ರತಿ ನಿತ್ಯ ಬರೆಯುವದರಲ್ಲಿ ಮಗ್ನರಾಗಬೇಕು. ಇತ್ತೀಚಿಗೆ ಕೆಎಎಸ್ ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯಿಂದ 20ಕ್ಕೂ ಅಧಿಕ ಅಭ್ಯರ್ಥಿಗಳು ವಿವಿಧ ಇಲಾಖೆಯ ಅಧಿಕಾರಿಗಳಾಗಿ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ, ಜಿಲ್ಲೆಯು ಹಿಂದುಳಿದ ಪ್ರದೇಶವೆಂದು ಕರೆಯಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ಮಕ್ಕಳೊಂದಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಪೈಪೆÇೀಟಿ ನೀಡುತ್ತಿದ್ದಾರೆ. ಮಕ್ಕಳಿಗೆ ಶಿಕ್ಷಕರ ಜೊತೆಗೆ ಪಾಲಕರ ಪೆÇ್ರೀತ್ಸಾಹ ಅಗತ್ಯ. ವಿದ್ಯಾರ್ಥಿಗಳು ಈ ಹಿಂದೆ ನಡೆದಿರುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸಂಗ್ರಹಿಸಿ ಅಧ್ಯಯನ ಮಾಡುವ ಸಾಮಥ್ರ್ಯ ಮೈಗೊಡಿಸಿಕೊಂಡಾಗ ಮಾತ್ರ ಪರೀಕ್ಷೆ ಸಮರ್ಥವಾಗಿ ಎದುರಿಸಲು ಸಾಧ್ಯವೆಂದರು.
ಹಿರಿಯ ಮಾನಸಿಕ ವೈದ್ಯ ಡಾ.ಮನೋಹರ್ ವೈ ಪತ್ತಾರ ಅವರು ವಿಶೇಷ ಉಪನ್ಯಾಸ ನೀಡಿದರು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣ ಗೌಡಗೇರಿ, ಕಲಬುರಗಿ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಸುನೀಲ ಕುಮಾರ್ ಚಂದರಗಿ, ಚಾಲುಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಸಂಗಮೇಶ ಮಂಗನವರ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button