ಹೆಬ್ರಿ: ತಮ್ಮನಿಂದ ಅಣ್ಣನ ಕೊಲೆ

ಹೆಬ್ರಿ, ಮಾ.31: ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ತಮ್ಮ ತನ್ನ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.


ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ(35) ಕೊಲೆಯಾಗಿದ್ದು, ಕೊಲೆ ಆರೋಪಿ ತಮ್ಮ ವಿಶ್ವನಾಥ್(30)ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದನು. ಇದರಿಂದ ಮಂಜುನಾಥ್ ಅವರ ತಲೆಯ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories