ಹೆಬ್ರಿ: ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

ಸಾಂದರ್ಭಿಕ ಚಿತ್ರ

ಹೆಬ್ರಿ: ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಕಳ್ತೂರಿನಲ್ಲಿ ನಡೆ್ಉದೆ.

ರಾಕೇಶ (31) ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು ಗ್ಯಾರೇಜ್‌ ನಲ್ಲಿ ಕೆಲಸ ಮಾಡಿಕೊಂಡಿದ್ದು, ಮನೆಗೆ ಬೀಗ ಹಾಕಿ ಹೆಂಡತಿಯನ್ನು ಕರೆದುಕೊಂಡು ಪತ್ನಿಯ ತವರು ಮನೆಯಲ್ಲಿನ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ. ಮೇ 12 ರ ಮದ್ಯಾಹ್ನ 03:30 ಗಂಟೆಗೆ ವಾಪಸು ಬಂದು ನೋಡಿದಾಗ ಮನೆಯ ಬಾಗಿಲು ಮುರಿದಿದ್ದು ಒಳಗೆ ಹೋಗಿ ನೋಡಿದಾಗ ಕಪಾಟಿನ ಬಾಗಿಲನ್ನು ಯಾವುದೋ ಆಯುಧ ದಿಂದ ಮೀಟಿ ತೆಗೆದು ಅದರಲ್ಲಿದ್ದ ಮೂರು ಲಕ್ಷ ಎಪ್ಪತೈದು ಸಾವಿರ ರೂಪಾಯಿ ಮೌಲ್ಯದ ಬಂಗಾರದ ಮತ್ತು ಬೆಳ್ಳಿಯ ಸ್ವತ್ತುಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 46/2024 ಕಲಂ: 454 ,380 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ

Latest Indian news

Popular Stories