Crime

ಎರಡನೇ ಪತ್ನಿಗೆ ಪಿಂಚಣಿ ಅಧಿಕಾರವಿಲ್ಲ; ಹೈಕೋರ್ಟ್ ಆದೇಶ

ಬೆಂಗಳೂರು: ಮೊದಲ ಪತ್ನಿ ಬದುಕಿದ್ದಾಗಲೇ ಎರಡನೇ ಪತ್ನಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

2ನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯನ್ಯಾಯಮೂರ್ತಿ ಪಿ. ಬಿ. ವರಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.
ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಮೊದಲನೇ ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹಾಗಾಗಿ ಎರಡನೇ ಪತ್ನಿಗೆ ಪಿಂಚಣಿಯ ಹಕ್ಕಿಲ್ಲ ಎಂದು ಹೈಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

ನಂಜುಂಡಪ್ಪ ಎಂಬುವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಮೊದಲನೇ ಪತ್ನಿಗೆ ನಿಯಮದಂತೆ ಕೌಟುಂಬಿಕ ಪಿಂಚಣಿ ನೀಡಲಾಗುತ್ತಿತ್ತು. ಆದರೆ ಎರಡನೇ ಪತ್ನಿ ಅರ್ಜಿ ಸಲ್ಲಿಸಿ ತಾವು ಎರಡನೇ ಪತ್ನಿಯಾಗಿದ್ದರೂ ಕೌಟುಂಬಿಕ ಪಿಂಚಣಿ ಅರ್ಹರಾಗಿದ್ದು, ತಮಗೆ ಪಿಂಚಣಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು.ಆದರೆ ಇಲಾಖೆ ಅವರ ಮನವಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button