Crime

ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್

ನವದೆಹಲಿ,ಫೆ.1:- ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಪ್ರಯೋಗಾಲಯ ಆರಂಭಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.
ಬಜೆಟ್ ಮಂಡಿಸಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರಕ್ಕೆ ಹಲವು ಕೊಡುಗೆ ಘೋಷಿಸಿದರು. ಆರೋಗ್ಯ ಕ್ಷೇತ್ರಕ್ಕೆ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಉನ್ನತ ಮಟ್ಟದ ಲ್ಯಾಬ್ ಗಳ ಸ್ಥಾಪನೆ 112 ಜಿಲ್ಲೆಗಳಲ್ಲಿ ಪೌಷ್ಠಿಕ ವೃದ್ಧಿಗೆ ಆಧ್ಯತೆ. ಜನರಿಗೆ ಶುದ್ದಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದೂ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿದೆ.
ಭಾರತದಲ್ಲಿ ಕೊರೊನಾಗೆ ಈಗಾಗಲೇ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. ಕೊರನಾ ನಂತರ ಜಗತ್ತು 2ನೇ ಮಹಾಯುದ್ಧದ ಪರಿಸ್ಥಿತಿ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಬಡವರು, ದಲಿತರು, ಬುಡಕಟ್ಟು ಸಮುದಾಯಕ್ಕೆ ನೆರವಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button