ಮಂಗಳೂರು: ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಸೋಮವಾರ ಮಂಗಳೂರು ತಾಲೂಕಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ತಾಲೂಕು ವ್ಯಾಪ್ತಿಯ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಜುಲೈ 11ರವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿತ್ತು.