ಇಂದಿನಿಂದ ಎರಡು ದಿನ ಸಿ.ಎಂ ಸಿದ್ದರಾಮಯ್ಯ ಧಾರವಾಡ ಪ್ರವಾಸ : ವಿವಿಧ ಯೋಜನೆಗಳಿಗೆ ಚಾಲನೆ

ಧಾರವಾಡ:ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 16 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು ಡಿ.16 ರಂದು ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಸ್ತೆ ಮೂಲಕ ಸಂಜೆ 5-20 ಕ್ಕೆ ಧಾರವಾಡಕ್ಕೆ ಆಗಮಿಸಿ, ಹುಬ್ಬಳ್ಳಿ-ಧಾರವಾಡ ಮುಖ್ಯರಸ್ತೆಯ ಓಝೋನ್ ಹೋಟೆಲ್ ಎದುರಿನ ಅಂಬರೈ ಗಾರ್ಡನ್‍ದಲ್ಲಿ ಚಂದ್ರಕಾಂತ ಗುರಪ್ಪ ಬೆಲ್ಲದ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮುಖ್ಯಮಂತ್ರಿಗಳು ಸಂಜೆ 6 ಗಂಟೆಗೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ.

ನಂತರ ರಾತ್ರಿ 7-15 ಕ್ಕೆ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಿ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ರೈಲ್ವೆ ಕ್ರೀಡಾ ಮೈದಾನದಲ್ಲಿ ಕಾಟೇರ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡುವರು.

ಮುಖ್ಯಮಂತ್ರಿಗಳು ಡಿ.17 ರಂದು ಬೆಳಿಗ್ಗೆ 9-30 ಗಂಟೆಗೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ನಾಗಶೆಟ್ಟಿಕೊಪ್ಪ, ಮಧುರ ಎಸ್ಟೇಟ್ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡುವರು.

Latest Indian news

Popular Stories