ಬೋಪಾಲ್ :ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

ಬೋಪಾಲ್, ಡಿಸೆಂಬರ್ 17; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದಿದೆ. ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ನವೆಂಬರ್ 17ರಂದು ಒಂದೇ ಹಂತದಲ್ಲಿ ಮಧ್ಯಪ್ರದೇಶ ರಾಜ್ಯದ 230 ಸದಸ್ಯ ಬಲದ ವಿಧಾನಸಭೆಗೆ ಮತದಾನ ನಡೆದಿತ್ತು. ಡಿಸೆಂಬರ್ 3ರಂದು ಮತ ಎಣಿಕೆ ನಡೆದಿತ್ತು.163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮರಳಿ ಅಧಿಕಾರ ಪಡೆದಿತ್ತು. ಕಾಂಗ್ರೆಸ್ 66 ಕ್ಷೇತ್ರದಲ್ಲಿ ಗೆಲುವು ಕಂಡಿತ್ತು.ರಾಜ್ಯದ ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ.

Latest Indian news

Popular Stories