ಮೋದಿ ಸಮ್ಮುಖದಲ್ಲಿ ಮಧ್ಯಪ್ರದೇಶದ CM ಆಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ

ಬೋಪಾಲ್: ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಉಪ ಮುಖ್ಯಮಂತ್ರಿಗಳಾದ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದಿಯೋರಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೋಪಾಲ್ ಗೆ ಆಗಮಿಸಿದ್ದರು.

ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭೋಪಾಲ್ ಗೆ ಆಗಮಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Latest Indian news

Popular Stories