
Crime
ಮಾಲ್ ಆಫ್ ಏಷ್ಯಾ’ ಪ್ರವೇಶ ನಿರ್ಬಂಧ ಪ್ರಶ್ನಿಸಿ ‘ಹೈಕೋರ್ಟ್’ಗೆ ರಿಟ್ ಅರ್ಜಿ:
ಬೆಂಗಳೂರು: ನಗರದಲ್ಲಿನ ಮಾಲ್ ಆಫ್ ಏಷ್ಯಾವನ್ನು ಜನದಟ್ಟಣೆ, ಸಂಚಾರ ದಟ್ಟಣೆ ಕಾರಣದಿಂದಾಗಿ ಜನವರಿ.16ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಬೆಂಗಳೂರು ನಗರ ಪೊಲೀಸರು ಬಂದ್ ಮಾಡಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಈ ಸಂಬಂಧ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿರುವಂತ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಲಿಮಿಟೆಡ್ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠದಲ್ಲಿ ತುರ್ತು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಇಂದಿನ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತುರ್ತು ವಿಚಾರಣೆಯ ವೇಳೆಯಲ್ಲಿ ಸ್ಪಾರ್ಕಲ್ ಒನ್ ಮಾಲ್ ಪರ ವಕೀಲರು ಮಾಲ್ ಆಫ್ ಏಷ್ಯಾ ಪ್ರವೇಶವನ್ನು 144 ಸೆಕ್ಷನ್ ಹೇರುವ ಮೂಲಕ ಪ್ರವೇಶ ನಿರ್ಬಂಧಿಸಲಾಗಿದೆ.
ಹೈಕೋರ್ಟ್ ನ್ಯಾಯಪೀಠದಲ್ಲಿ ಮಾಲ್ ಆಫ್ ಏಷ್ಯಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.




