ಅಕ್ರಮ ದತ್ತು ಪ್ರಕರಣ: ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡ ಅವರುಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.

ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು.

ಅಪ್ರಾಪ್ತ ಬಾಲಕಿಯನ್ನ ಸೋನುಗೌಡ ಆಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಮತ್ತಷ್ಟು ಬೆಳವಣಿಗೆ ಕಂಡುಬರುತ್ತಿವೆ. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.

Latest Indian news

Popular Stories