ಆದಾಯ ಇಲ್ಲದೇ ‘ಗ್ಯಾರಂಟಿ’ ಜಾರಿ, ರಾಜ್ಯದ ‘ದಿವಾಳಿ’ಗೆ ದಾರಿ- ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ಬಾರಿ ಬಜೆಟ್ ಮಂಡನೆ ಮಾಡಿ, ರಾಜ್ಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡದೇ ಗ್ಯಾರೆಂಟಿ ಹೆಸರಿನಲ್ಲಿ ಕೇವಲ ಕಲ್ಯಾಣ ಕಾರ್ಯಗಳಿಗೆ ಹಣ ಖರ್ಚು ಮಾಡುತ್ತಿರುವುದು ಕಾಯಕವಿಲ್ಲದೇ ದಾಸೋಹ ಮಾಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು 15ನೇ ಬಾರಿ ಬಜೆಟ್ ಮಂಡನೆ ಮಾಡಿ ಅದನ್ನು ಹೇಗೆ ನಿರ್ವಹಣೆ ಮಾಡುತ್ತಾರೆ ಎನ್ನುವುದು ನಮಗೆ ಕುತೂಹಲ ಇದೆ. ಕಾಯಕ ಮತ್ತು ದಾಸೋಹದ ಬಗ್ಗೆ ಮಾತನಾಡಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ. ಕಾಯಕ ಇದ್ದರೆ ಮಾತ್ರ ದಾಸೋಹ. ಕೇವಲ ದಾಸೋಹ ಮಾಡಿಕೊಂಡು ಹೋದರೆ ಉಪಯೋಗವಿಲ್ಲ. ಕಾಯಕಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸಬೇಕು.

ಕಾಯಕದಿಂದ ಬಂದ ಆದಾಯದಿಂದ ದಾಸೋಹ ಮಾಡಿದ್ದರೆ ತಪ್ಪಿಲ್ಲ. ಇವರ ಬಜೆಟ್ಟನ್ನು ನೋಡಿದಾಗ ಕಾಯಕ ಎಷ್ಟು ಆಗಬೇಕೊ ಅಷ್ಟು ಆಗುತ್ತಿಲ್ಲ. ಉತ್ಪಾದನೆ ಮತ್ತು ಹಂಚಿಕೆಯನ್ನು ಸರಿಯಾಗಿ ತೆಗೆದುಕೊಂಡು ಹೋಗದಿದ್ದರೆ, ಕಾಯಕ ಮತ್ತು ದಾಸೋಹಕ್ಕೆ ಮಹತ್ವ ಇಲ್ಲ ಎಂದು ಹೇಳಿದರು.

ಹಿಂದಿನ ಸರ್ಕಾರ ಆಹಾರ ಭದ್ರತೆಗೆ ಒತ್ತು ನೀಡಿತ್ತು ಎಂದು ಹೇಳಿದ್ದಾರೆ. ಇಂದಿನ ಎನ್‌ಡಿಎ ಸರ್ಕಾರ ಕೂಡ ಆಹಾರ ಭದ್ರತೆಗೆ ಆದ್ಯತೆ ನೀಡಿದೆ. ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಜನರಿಗೆ ಅಕ್ಕಿ ಸಿಗುತ್ತಿದ್ದರೆ ಅದನ್ನು ಸಂಪೂರ್ಣ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.

Latest Indian news

Popular Stories