ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು ಈಗಾಗಲೇ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ರಣತಂತ್ರ ಬಿಜೆಪಿ ಹೆಣದಿದ್ದು ಇದೀಗ ಈ ಒಂದು ಲೀಸ್ಟ್ ಅಲ್ಲಿ ಕೆ ಆರ್ ಪಿ ಪಿ ಪಕ್ಷದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ್ ರೆಡ್ಡಿ ಕೂಡ ಇದ್ದಾರೆ.
ಇದೇ ವಿಷಯವಾಗಿ ಇಂದು ಅವರು,ಬೆಳಗ್ಗೆ 11 ಗಂಟೆಗೆ ಶಾಸಕ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದು, ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದಾರೆ.ಪಕ್ಷದ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸಭೆ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಪಕ್ಷ ಬಿಟ್ಟು ಹೋದವರನ್ನು ಮರಳಿ ಪಕ್ಷಕ್ಕೆ ಕರೆತರುವ ಒಂದು ಕೆಲಸಕ್ಕೆ ಕೈ ಹಾಕಿದ್ದು, ಅದೀಗ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಕೆಲಸ ಯಶಸ್ವಿಯಾಗಿದೆ. ಅದರಂತೆ ಇದೀಗ ಜನಾರ್ದನ ರೆಡ್ಡಿ ಅವರನ್ನು ಕೂಡ ಪಕ್ಷಕ್ಕೆ ಮರಳಿ ಕರೆಸುವ ಪ್ರಯತ್ನ ನಡೆಯುತ್ತಿದೆ.