Crime

ವಿಧಾನಸಭೆ ಅಧಿವೇಶನ ಶೇಕಡಾ 90ರಷ್ಟು ಯಶಸ್ವಿ; 36 ವಿಧೇಯಕ ಅಂಗೀಕಾರ- ಕಾಗೇರಿ

ಬೆಂಗಳೂರು, ಸೆ.28(ಯುಎನ್‍ಐ):-ಹದಿನೈದನೇ ವಿಧಾನಸಭೆಯ 7ನೇ ಅಧಿವೇಶನ ಸೆ. 21ರಿಂದ 26ರವರೆಗೆ 6 ದಿನಗಳ ಕಾಲ 40 ಗಂಟೆಗಳ ಕಾರ್ಯಕಲಾಪ ನಡೆಸಲಾಗಿದೆ. ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ, ಕೋವಿಡ್ 19, ಗಡಿ ಸಂಘರ್ಘ ಹಾಗೂ ಅತಿವೃಷ್ಟಿಯಿಂದ ಮೃತರಾದವರಿಗೆ ಗೌರವಪೂರ್ವಕವಾಗಿ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಲಾಗಿದೆ. ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರು ನೀಡಿರುವ 2018-19ನೇ ಸಾಲಿನ ಧನವಿನಿಯೋಗ ಲೆಕ್ಕಗಳು ಮತ್ತು ಹಣಕಾಸು, ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ ಹಾಗೂ 74ನೇ ಸಂವಿಧಾನ ತಿದ್ದುಪಡಿ ಕಾಯ್ದೆಯ ಅನುμÁ್ಠನದ ಮೇಲಿನ ಕಾರ್ಯನಿರ್ವಹಣಾ ಲೆಕ್ಕಪರಿಶೋಧನೆ ವರದಿಯನ್ನು ಸದನವನ್ನು ಮಂಡಿಸಲಾಗಿದೆ ಎಂದರು.
ಒಟ್ಟು 3071 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 1109 ಪ್ರಶ್ನೆಗಳ ಉತ್ತರಗಳನ್ನು ಸದನದಲ್ಲಿ ಮಂಡಿಸಲಾಗಿದ. ಈ ಅಧಿವೇಶನದಲ್ಲಿ ಸದಸ್ಯರಿಗೆ ಮತ್ತು ಪತ್ರಿಕಾ ಮಾಧ್ಯಮದವರಿಗೆ ಲಿಖಿತ ಮೂಲಕ ಉತ್ತರಿಸಲಾಗುವ ಪ್ರಶ್ನೆಗಳಿಗೆ ಉತ್ತರಗಳನ್ನು ಇ-ಮೇಲ್ ಮೂಲಕ ಒದಗಿಸಿರುವುದು ಒಂದು ವಿಶೇಷವಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button